September 8, 2026
WhatsApp Image 2026-09-08 at 2.56.08 PM (1)

ಬಂಟರ ಯಾನೆ ನಾಡವರ ಮಾತೃಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ, ಮಹಾಗಣಯಾಗವು ಸೆಪ್ಟೆಂಬರ್ ತಿಂಗಳ ತಾರೀಕು 14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ ಜರಗಲಿದೆ.

ದಿನಾಂಕ 13.09.2026ನೇ ಆದಿತ್ಯವಾರ ಸಾಯಂಕಾಲ 5.00 ಗಂಟೆಗೆ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಶ್ರೀ ರಾಮದಾಸ್ ಆಚಾರ್ಯರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲಿನ ಓಂಕಾರ ನಗರಕ್ಕೆ ಬರಮಾಡಿಕೊಳ್ಳುವುದು.

ದಿನಾಂಕ 14.09.2026ನೇ ಸೋಮವಾರ ಬೆಳಿಗ್ಗೆ 8.00 ಗಂಟೆಗೆ ಸ್ಥಳ ಶುದ್ಧಿ ಮೂರ್ತಿ ಪ್ರತಿಷ್ಠೆ ನಡೆದು, 9.00 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣೆ ಕಾರ್ಯಕ್ರಮ ನಡೆಯಲಿರುವುದು. ಸಾಯಂಕಾಲ ಗಂಟೆ 3.00ರಿಂದ ಪಾಂಚಜನ್ಯ ಪ್ರತಿಷ್ಠಾನ ಕುಡ್ಲ ಇದರ ಕಲಾವಿದರಿಂದ ‘ಶ್ರೀ ಮಂಗಳಪುರದ ಮಂಗಳಾಂಬಿಕೆ’ ಪೌರಾಣಿಕ ನೃತ್ಯ ನಾಟಕ ನಡೆಯಲಿರುವುದು. ಸಂಜೆ 5.00 ರಿಂದ 7.00 ರ ತನಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿರುವುದು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ರಾತ್ರಿ 7.30ರಿಂದ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 8.00ರಿಂದ ‘ಬಂಟಕಲಾ ಸಂಗಮ-2026’, ವಿವಿಧ ಬಂಟರ ಸಂಘಗಳಿಂದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಜರಗಲಿರುವುದು.

ದಿನಾಂಕ 15.09.2026ನೇ ಮಂಗಳವಾರ ಬೆಳಿಗ್ಗೆ 11.30ರಿಂದ ಮೂಡಪ್ಪ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಸಾಯಂಕಾಲ 4.00ರಿಂದ ಅಷ್ಟೋತ್ತರ ಸಹಸ್ರನಾರಿಕೇಳ ಮಹಾಗಣಯಾಗದ ಯಾಗ ಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಭೂಶುದ್ಧಿ, ವಾಸ್ತು ರಾಕ್ಷೋಘ್ನ ಹವನ, ಮಹಾಪೀಠದಲ್ಲಿ ಕಲಶ ಸ್ಥಾಪನೆ, ಮಹಾಗಣಯಾಗದ ಸೇವಾರ್ಥಿಗಳಿಂದ ಸಂಕಲ್ಪ.

ಸಂಜೆ 5.00ರಿಂದ 7.00ರವರೆಗೆ ಧಾರ್ಮಿಕ ಸಭೆ. ಈ ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ರಾತ್ರಿ 7.30ರಿಂದ ಹೂವಿನ ಪೂಜೆ, ರಂಗಪೂಜೆ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯುವುದು. 8.00ರಿಂದ ಸ್ವರಲಯ ಸಿಂಪೋನಿ ಕಲಾಶಾಲೆಯ ಸಂಗೀತ ಸಂಜೆ ಕಾರ್ಯಕ್ರಮ. ದಿನಾಂಕ 16.09.2026ನೇ ಬುಧವಾರ ಬೆಳಿಗ್ಗೆ 8.30ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಆರಂಭಗೊಂಡು 11.00 ಗಂಟೆಗೆ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿರುವುದು.

ಸಂಜೆ 3.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂರ್ವ ಪೂಜೆ ನಡೆದು ಗಣ್ಯರ ಉಪಸ್ಥಿತಿಯಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಲಾಗುವುದು. ಶೋಭಾಯಾತ್ರೆಯು ‘ಓಂಕಾರನಗರ’ದಿಂದ ಶ್ರದ್ಧಾಭಕ್ತಿಯಿಂದ ಜಿಲ್ಲೆಯ ವಿವಿಧ ಭಜನಾ ತಂಡಗಳ ಸೇವೆಯೊಂದಿಗೆ ಬಂಟ್ಸ್ ಹಾಸ್ಟೇಲ್ ಸರ್ಕಲ್, ಪಿ.ವಿ.ಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಗುವುದು.

ಈ ಮೂರು ದಿನಗಳಲ್ಲಿ ಗಣೇಶೋತ್ಸವದ ವೇದಿಕೆಯಲ್ಲಿ ವಿವಿಧ ಭಜನಾ ತಂಡಗಳಿಂದ ಭಜನ ಸೇವೆ ನಡೆಯಲಿರುವುದು.

ಸಾರ್ವಜನಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸುವಂತೆ ವಿನಂತಿಸುತ್ತಿದ್ದೇವೆ.

ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿರುವವರು

ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ, ಮೇನೇಜಿಂಗ್ ಟ್ರಸ್ಟಿ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ

ಶ್ರೀ ಹೇಮನಾಥ ಶೆಟ್ಟಿ ಕಾವು, ಉಪಾಧ್ಯಕ್ಷರು, ಬಂಟರ ಯಾನೆ ನಾಡವರ ಮಾತೃಸಂಘ

ಶ್ರೀ ಎಮ್. ಕರುಣಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ, ಬಂಟರ ಯಾನೆ ನಾಡವರ ಮಾತೃಸಂಘ

ಶ್ರೀ ಪದ್ಮನಾಭ ಶೆಟ್ಟಿ ಪುಂಚಮೆ, ಜೊತೆ ಕಾರ್ಯದರ್ಶಿ, ಬಂಟರ ಯಾನೆ ನಾಡವರ ಮಾತೃಸಂಘ

ಶ್ರೀ ರವಿರಾಜ್ ಶೆಟ್ಟಿ, ಟ್ರಸ್ಟಿ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ

ಡಾ. ಆಶಾಜ್ಯೋತಿ ರೈ ಬಂಬ್ರಾಣ ಟ್ರಸ್ಟಿ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ

ಶ್ರೀ ಜಯಶೀಲ ಅಡ್ಯಂತಾಯ, ಅಧ್ಯಕ್ಷರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಶ್ರೀ ಸದಾಶಿವ ಶೆಟ್ಟಿ ಬಿಜೈ, ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ.

About The Author

Leave a Reply