

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್ ಕಡೂರು. ದಿನಾಂಕ 8. 9.2026. ಮಂಗಳವಾರ ದಂದು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕಡೂರು ಇವರ ಸಹಯೋಗದೊಂದಿಗೆ ಡಿಗ್ರಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಡಾಕ್ಟರ್ ಶ್ರೀ. ನಿಶಾಂತ್ ಸಪ್ತಗಿರಿ. ಅವರು ಪ್ರಾತ್ಯಕ್ಷಿತವಾಗಿ, ಹೃದಯಾಘಾತವಾದಾಗ ಹಾವು ಕಡಿದಾಗ ಮತ್ತು ನಾಯಿ ಕಡಿದಾಗ ಅಪಘಾತದಂತಹ ದುರ್ಘಟನೆಗಳು ಸಂಭವಿಸಿದಾಗ ಪ್ರಥಮ ಚಿಕಿತ್ಸೆಯನ್ನು ನೀಡುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಹಾಗೂ ಕ್ಷೇತ್ರದ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಬಿ ಸಿ ಮಮತಾ ರವರು ಆರೋಗ್ಯ ಇಲಾಖೆಯಲ್ಲಿ ಸಿಗುವ ಸೌಕರ್ಯ ಸೇವೆ ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದಲ್ಲಿ, ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ಭಾಗವಹಿಸಿದಂತ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆಯ ನೀಡುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಕಡೂರು ತಾಲೂಕಿನ ಆರೋಗ್ಯ ಇಲಾಖೆಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಇದು ಒಂದು ಕಾರ್ಯಕ್ರಮವಾಗಿ ಹೊರಹೊಮ್ಮಿದೆ.






