

ಬಂಟ್ವಾಳ: ತಾಲೂಕಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ವೀಕರಿಸಿದ ಶ್ರೀ ಉದಯ್ ಕುಮಾರ್ ಸರ್ ರವರನ್ನು ಮಸ್ಜಿದುನ್ನೂರ್ ಜುಮಾ ಮಸೀದಿ ಆಡಳಿತ ಸಮಿತಿ, ನೀರಪಾದೆ ಬಾಳ್ತಿಲ ವತಿಯಿಂದ ಗೌರವ ಸಮರ್ಪಣೆಯೊಂದಿಗೆ ಸನ್ಮಾನಿಸಲಾಯಿತು.
ನೀರಪಾದೆ ಮಸ್ಜಿದುನ್ನೂರ್ ಜುಮಾ ಮಸೀದಿ ಆವರಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಶಿಕ್ಷಣ ಕ್ಷೇತ್ರದಲ್ಲಿ ಶ್ರೀ ಉದಯ್ ಕುಮಾರ್ ರವರು ಸಲ್ಲಿಸುತ್ತಿರುವ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸರ್ವತೋಮುಖ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು.
ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವುದು ನೀರಪಾದೆ ಹಾಗೂ ಸುತ್ತಮುತ್ತಲಿನ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಸ್ಜಿದುನ್ನೂರ್ ಜುಮಾ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಶ್ರೀ ಉದಯ್ ಕುಮಾರ್ ರವರಿಗೆ ಶುಭ ಹಾರೈಸಿದರು.







