September 20, 2026
WhatsApp Image 2026-09-19 at 7.04.04 PM

ಉಪ್ಪಿನಂಗಡಿ: ಗಂಡನೊಂದಿಗೆ ಫೋನ್‌ನಲ್ಲಿ ನಡೆದ ತೀವ್ರ ವೈವಾಹಿಕ ಕಲಹದಿಂದ ಆಕ್ರೋಶಗೊಂಡ ಮಹಿಳೆಯೊಬ್ಬಳು ಮೂರು ವರ್ಷದ ಇಬ್ಬರು ಪುಟಾಣಿ ಮಕ್ಕಳನ್ನು ಬಾವಿಗೆ ಎಸೆದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಕಲಹದ ಉದ್ವೇಗದಲ್ಲಿ ಮಹಿಳೆ ತನ್ನ ಮೂರೂವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಮೂರು ವರ್ಷದ ಮಗುವನ್ನು ಮನೆ ಸಮೀಪದ ಬಾವಿಗೆ ಎಸೆದಿದ್ದಾಳೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಬಾವಿಗಿಳಿದು ಇಬ್ಬರೂ ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ, ಗಂಡನ ತಂಗಿಯ ಮೂರು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಆರೋಪಿತೆಯ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೆರ್ಣೆ ನಿವಾಸಿ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ ನಡುವೆ ಶನಿವಾರ ಮಧ್ಯಾಹ್ನ ಫೋನ್ ಕರೆಯಲ್ಲಿ ತೀವ್ರ ಗಲಾಟೆ ನಡೆದಿದೆ. ಈ ವೇಳೆ ಕೋಪೋದ್ರಿಕ್ತಗೊಂಡ ನೂರುನ್ನಿಸಾ ಈ ದಾರುಣ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply