September 21, 2026
WhatsApp Image 2026-09-21 at 11.26.49 AM

ಚಾಲಕನ ನಿರ್ಲಕ್ಷ್ಯದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ನಡೆದಿದೆ.

ಘಟನೆಯಲ್ಲಿ ಮದ್ಯದ ಸಾಗಿಸುತ್ತಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಹಾನಿಗೊಳಗಾಗಿದೆ. ಜೊತೆಗೆ ಲಾರಿ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸಕಲೇಶಪುರದಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಶಮೀರ್ ಎಂಬವರು ಚಾಲನೆ ಮಾಡುತ್ತಿದ್ದ ಲಾರಿ, ನೆಲ್ಯಾಡಿ ಬಳಿ ಮುಂದೆ ಸಾಗುತ್ತಿದ್ದ ಮದ್ಯ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಲಾರಿಯ ಮಾಲೀಕರು ನೆಲಮಂಗಲ ನಿವಾಸಿ ರಾಜಾ ಎಂ. ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಮದ್ಯ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಮೂರು ವಾಹನಗಳಿಗೂ ಹಾನಿಯಾಗಿದ್ದು, ಲಾರಿಯಲ್ಲಿದ್ದ ಮದ್ಯದ ಸರಕು ಕೂಡ ಹಾನಿಗೊಳಗಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಮಾಲೀಕ ರಾಜಾ ನೀಡಿದ ದೂರಿನ ಆಧಾರದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

About The Author

Leave a Reply