September 21, 2026
WhatsApp Image 2026-09-21 at 4.48.40 PM

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಬಳಿಕ ಸುಪ್ರೀಂ ಕೋರ್ಟ್‌ಗೆ ವಿಶೇಷ ಮನವಿ ಸಲ್ಲಿಸಿದ್ದರು. ತಿಂಗಳ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಂಜಯ್‌ಕುಮಾರ್ ಪೀಠ ತೀರ್ಪು ಕಾಯ್ದಿರಿಸಿತ್ತು.

ಇದೀಗ ಮರು ತನಿಖೆಗೆ ಆದೇಶಿಸಿದ್ದು, ಹೊಸ ಎಸ್‌ಐಟಿ ರಚಿಸಿ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ಸುಪ್ರೀಂ ಕೋರ್ಟ್ ಹೇಳಿರುವುದಾಗಿ ತಿಳಿದುಬಂದಿದೆ.

About The Author

Leave a Reply