September 23, 2026
WhatsApp Image 2026-09-22 at 8.45.59 AM

ಮಂಗಳೂರು: ವಂಚನೆ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ದೂರುದಾರರಿಗೆ ಮರಳಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಜ್ಪೆ ಪೊಲೀಸ್ ನಿರೀಕ್ಷಕ  ಬಾಲಕೃಷ್ಣಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಸಂತ್ರಸ್ತರಿಂದ ಜಪ್ತಿ ಮಾಡಿದ್ದ ಹಣವನ್ನು ಅವರಿಗೆ ವಾಪಸ್ ನೀಡಲು ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಈಗಾಗಲೇ ₹15,000 ಮುಂಗಡವಾಗಿ ಪಡೆದುಕೊಂಡಿದ್ದರು.

ಉಳಿಕೆ ಹಣದಲ್ಲಿ ₹5,000 ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಬಾಲಕೃಷ್ಣ ಅವರನ್ನು ರೆಡ್ ಹ್ಯಾಂಡ್ ಆಗಿ ಹಣದ ಸಮೇತ ಬಂಧಿಸಿದ್ದರು.
ಲೋಕಾಯುಕ್ತ ಪೊಲೀಸರು ಬಂಧಿತ ಇನ್ಸ್‌ಪೆಕ್ಟರ್ ಅನ್ನು ಮಂಗಳವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಈ ವೇಳೆ ತಮಗೆ ಅನಾರೋಗ್ಯವಿದೆ ಎಂದು ಕಾರಣ ನೀಡಿ ಆಸ್ಪತ್ರೆಗೆ ದಾಖಲಿಸುವಂತೆ ಬಾಲಕೃಷ್ಣ ವಿನಂತಿಸಿಕೊಂಡರಾದರೂ, ನ್ಯಾಯಾಲಯವು ಅದನ್ನು ಪುರಸ್ಕರಿಸದೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

About The Author

Leave a Reply