September 27, 2026
WhatsApp Image 2026-09-27 at 9.51.20 AM

ಮಂಗಳೂರಿನ ಪಾಂಡೇಶ್ವರದ ರಾಮ ಲಕ್ಷ್ಮಿ ನಾರಾಯಣ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಆಲ್ ಕಾಲೇಜ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಕಾರ್ಯಕ್ರಮ ಸಂಭ್ರಮದ ನಡುವೆಯೇ ದುಃಖದ ಘಟನೆಗೆ ಸಾಕ್ಷಿಯಾಗಿದೆ.

ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಬರುವಾಗ ಸುಮಾರು 2 ಗಂಟೆಯಾಗಿತ್ತು. ಈ ವೇಳೆ ಹೊರಗೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಯುತ್ತಿತ್ತು.

ಈ ಸಂಭ್ರಮವನ್ನು ನೋಡುತ್ತಾ ಕಾಂಪೌಂಡ್ ಪಕ್ಕದಲ್ಲಿ ನಿಂತಿದ್ದ ಮೊಹಮ್ಮದ್ ಶಹಮಾಝ್ ಎಂಬ ವಿದ್ಯಾರ್ಥಿ ಮೇಲೆ ಏಕಾಏಕಿ ಕಾಂಪೌಂಡ್ ಗೋಡೆ ಕುಸಿದು ತಲೆಯ ಮೇಲೆ ಬಿದ್ದಿದೆ.

ತಕ್ಷಣವೇ ವಿದ್ಯಾರ್ಥಿಗಳು ಸೇರಿ ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ಕುಟುಂಬಕ್ಕೆ ಹಾಗೂ ವಿದ್ಯಾರ್ಥಿ ಸಮುದಾಯಕ್ಕೆ ತೀವ್ರ ನೋವು ತಂದಿದೆ.

ಕಾರ್ಯಕ್ರಮ ನಿಲ್ಲಿಸಲಿಲ್ಲ ಎಂಬ ಬೇಸರ

ಇಷ್ಟು ದೊಡ್ಡ ದುರಂತ ನಡೆದರೂ ಆಲ್ ಕಾಲೇಜು ವಿದ್ಯಾರ್ಥಿಗಳ ಕೆಲವರು ಕಾರ್ಯಕ್ರಮವನ್ನು ನಿಲ್ಲಿಸಲಿಲ್ಲ. ಕೆಲವು ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸುತ್ತಾ, ಪಟಾಕಿ ಸಿಡಿಸಿ ಮೆರವಣಿಗೆ ಮಾಡಿ ಸಂಭ್ರಮಾಚರಣೆ ಮುಂದುವರಿಸಿದ್ದು ತುಂಬಾ ದುಃಖಕರವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರಿಯಾಝ್ ಹರೇಕಳ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ರಿಯಾಝ್ ಹರೇಕಳ ಆಗ್ರಹ

ಕಾರ್ಯಕ್ರಮದ ಆಯೋಜಕರ ನಿರ್ಲಕ್ಷ್ಯ ಹಾಗೂ ರಾಮ ಲಕ್ಷ್ಮಣ್ ಕನ್ವೆಂಟ್ ಸೆಂಟರ್ ಮಾಲಕನ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ರಿಯಾಝ್ ಹರೇಕಳ ಆಗ್ರಹಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ
ಮೃತ ವಿದ್ಯಾರ್ಥಿ ಮೊಹಮ್ಮದ್ ಶಹಮಾಝ್ ಕುಟುಂಬಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು. ಹಾಗೂ ರಾಮ ಲಕ್ಷ್ಮಣ್ ಕನ್ವೆಂಟ್ ಸೆಂಟರ್ ಮಾಲಕ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹರೆಕಳ ಒತ್ತಾಯಿಸಿದ್ದಾರೆ.

About The Author

Leave a Reply