September 30, 2026
WhatsApp Image 2026-09-30 at 8.41.20 AM

ಹೊಸದಿಲ್ಲಿ: ದೇಶದಲ್ಲಿ ಮಸೀದಿಗಳು ಮತ್ತು ವಕ್ಫ್ ಆಸ್ತಿಗಳ ಮೇಲಿನ ದಾಳಿಗಳನ್ನು ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸಮಾವೇಶದ ವೇಳೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (SIO) ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಹಫೀಝ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಅನೀಸ್ ರಹಮಾನ್ ಸೇರಿದಂತೆ ಹಲವು ಸಂಸದರು ಮತ್ತು ಪ್ರಮುಖ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಧಾರ್ಮಿಕ ಸ್ಥಳಗಳು ಮತ್ತು ವಕ್ಫ್ ಆಸ್ತಿಗಳ ಮೇಲಿನ ಸರಣಿ ಆಕ್ರಮಣಗಳನ್ನು ಖಂಡಿಸಿ, ನ್ಯಾಯ ಮತ್ತು ರಕ್ಷಣೆಗೆ ಆಗ್ರಹಿಸಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತೋಟಿಗೆ ತರಲು ಪೊಲೀಸರು ನಾಯಕರನ್ನು ಬಂಧಿಸಿರುವುದಕ್ಕೆ ವಿವಿಧ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

About The Author

Leave a Reply