September 30, 2026
WhatsApp Image 2026-09-30 at 12.44.57 PM

ಕಾಪು ಫ್ಲೈಓವರ್ ಬಳಿ ಆಟೋ ರಿಕ್ಷಾ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.

ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಗೆ, ರಸ್ತೆಬದಿಯ ಬ್ಯಾನರ್ ತೆರವುಗೊಳಿಸಲು ಬಳಸಲಾಗುತ್ತಿದ್ದ ಕಾಪು ಪುರಸಭೆಯ ಟೆಂಪೋ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಆಟೋದಲ್ಲಿದ್ದ ಉಚ್ಚಿಲ ನಿವಾಸಿ ಸಂಧ್ಯಾ ಹಾಗೂ ಅವರ ಮಕ್ಕಳಾದ ಗಾಯನ್ ಮತ್ತು ಸುವಿತ್ ಗಾಯಗೊಂಡಿದ್ದರು. ಅಪಘಾತದಲ್ಲಿ ಒಂದೂವರೆ ವರ್ಷದ ಸುವಿತ್ ತೀವ್ರವಾಗಿ ಗಾಯಗೊಂಡಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

About The Author

Leave a Reply