September 30, 2026
WhatsApp Image 2026-09-30 at 4.47.42 PM

ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (MRPL) ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ದರ್ಶನ್​​ ಹೆಚ್​ವಿ ಮಾಹಿತಿ ನೀಡಿದ್ದಾರೆ.

ಓರ್ವ ಸಾವು; 9 ಜನರಿಗೆ ಗಾಯ

ಮನೀಶ್​(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್​​​ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್, ಅಕ್ಷಯ್ ಹಾಗೂ​ ಮತ್ತೋರ್ವನಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Leave a Reply