

ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು, ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ.
ಈತನಿಗೆ ಕಳೆದ ತಿಂಗಳಷ್ಟೇ ಮದುವೆ ನಿಶ್ಚಯವಾಗಿತ್ತು. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಎರಡೂ ಮನೆಯವರು ಮದುವೆ ಸಂಭ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
ಆದರೆ ಕಳೆದ 4 ದಿನದ ಹಿಂದೆ ಮನೆಯಲ್ಲೇ ಯುವಕ ಮನೆಯಲ್ಲೇ ವಿಷ ಸೇವಿಸಿದ್ದ. ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ







