October 2, 2026
WhatsApp Image 2026-10-02 at 9.25.33 AM

ಸುಳ್ಯ: ಸುಳ್ಯ ಕಸಬಾ ಗ್ರಾಮದ ಅಂಬೆಟೆಡ್ಕದಲ್ಲಿ ಗ್ಯಾರೇಜ್‌ನಲ್ಲಿ ಇರಿಸಲಾಗಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

26.08.2026ರ ರಾತ್ರಿ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 120/2026, ಕಲಂ 326(g) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣಾ ಪೊಲೀಸರು ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂಬವರನ್ನು ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Leave a Reply