

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿರುವ ಘಟನೆ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು ಗಾಯಗೊಂಡಿದ್ದಾರೆ.
ರಾಯಚೂರು ಮೂಲದ ಕುಟುಂಬ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದೆ. ಕರಿಲಿಂಗಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದಾರೆ.

ಬೆಳಗ್ಗೆ 6 ಗಂಟೆಗೆ ಸಿಲಿಂಡರ್ ಸ್ಫೋಟವಾಗಿದ್ದು, ಮಕ್ಕಳು ಹಾಗೂ ದಂಪತಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಲಕ್ಷ್ಮಮ್ಮ ಮತ್ತು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ. 6 ಜನರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.






