October 10, 2026
WhatsApp Image 2026-10-10 at 12.03.46 PM

ಕರ್ತವ್ಯದಲ್ಲಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್‌ ಕುಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಾನ್ಸ್‌ಟೇಬಲ್‌ ಅವರನ್ನು ಅಮಾನತುಗೊಳಿಸಲಾಗಿದೆ.

ಕಲಬುರಗಿ ಕಮಲಾಪುರ ತಾಲೂಕಿನ ಮಹಾಗಾಂವ್‌ ಪೊಲೀಸ್‌ ಠಾಣೆಯ ಪೇದೆ ಹಣಮಂತ ಅವರು ಹರಸೂರು ಗ್ರಾಮದ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್‌ ಸೇವಿಸಿದ್ದರು. ಇದನ್ನು ಗ್ರಾಮಸ್ಥರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್‌ ಆದ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಹರಸೂರು ಗ್ರಾಮವು ಮಹಾಗಾಂವ್‌ ಠಾಣೆ ವ್ಯಾಪ್ತಿಗೆ ಸೇರಿದ್ದು, ಅಲ್ಲಿ ಗಲಾಟೆ ನಡೆದ ಹಿನ್ನೆಲೆಯಲ್ಲಿ ಬಂದೋಬಸ್ತ್‌ ಕರ್ತವ್ಯಕ್ಕೆ ಹಣಮಂತ ಅವರನ್ನು ನಿಯೋಜಿಸಲಾಗಿತ್ತು. ಆದರೆ, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಅವರು ಮದ್ಯ ಸೇವಿಸಿರುವುದು ದೃಢಪಟ್ಟಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕಾನ್ಸ್‌ಟೇಬಲ್‌ ಹಣಮಂತ ಅವರನ್ನು ಅಮಾನತುಗೊಳಿಸಿ ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.

About The Author

Leave a Reply