October 12, 2026
WhatsApp Image 2026-10-04 at 11.12.22 AM

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ನಡತೆ ಮೇಲಿನ ಶಂಕೆಯಿಂದ ಪತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.


ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ದುರ್ದೈವಿ. ಶಿವಲಿಂಗಪ್ಪ ಕೊಲೆಗೈದ ಆರೋಪಿ. ಅನೈತಿಕ ಸಂಬಂಧದ ಶಂಕೆಯಿಂದ ಈ ಕೃತ್ಯ ಎಸಗಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply