October 17, 2026
WhatsApp Image 2026-10-16 at 10.29.13 PM

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಮೃತಪಟ್ಟಿದ್ದಾರೆ.

ಮಮತಾ ಅವರು ಸಂಜೆ ಅಂಚೆ ಇಲಾಖೆಯ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರು ಪುತ್ತೂರು ಕೆಎಸ್‌ಆರ್‌ಟಿಸಿಯಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿರುವ ಸೀತಾರಾಮ ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

About The Author

Leave a Reply