October 19, 2026
WhatsApp Image 2026-10-19 at 12.31.11 PM

ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ಗಲಾಟೆಗೆ ತಿರುಗಿ, ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಭೀತಿ ಮೂಡಿಸಿದ ಘಟನೆ ಅ.18ರ ರಾತ್ರಿ ನಡೆದಿದೆ.

ಮಂಜುನಾಥ್, ವಿಶ್ವನಾಥ ಹಾಗೂ ಮತ್ತೊಬ್ಬ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಂಜುನಾಥ್ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಮತ್ತು ವಿಶ್ವನಾಥನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ವಿಚಾರಣೆ ವೇಳೆ, ಮದ್ಯದ ಅಮಲಿನಲ್ಲಿದ್ದ ಮುನ್ನ ಎಂಬಾತ ಮಂಜುನಾಥ್‌ನ ಮನೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 194, 296, 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 25(1B)(b)ರಂತೆ ಪ್ರಕರಣ ದಾಖಲಾಗಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ವಿಚಾರಣೆ ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.

About The Author

Leave a Reply