October 26, 2026
WhatsApp Image 2026-10-26 at 12.45.49 PM

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಶ್ರೀ ಝಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ನಟ ಧನ್ವೀರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೋಲಿಸಗ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಧನ್ವೀರ್ ಅವರ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ NSUI ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಮುಖಂಡರಾದ ಕೌಶಿಕ್, ಸುಶಾನ್ ಹಾಗೂ ಏತಾನ್ ಉಪಸ್ಥಿತರಿದ್ದರು

About The Author

Leave a Reply