

ಹಾಸನ: ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಭವಿತ-ನಾಗೇಶ್ ದಂಪತಿ ಪುತ್ರಿ ಹಿಮಾ (23) ಆತ್ಮಹತ್ಯೆಗೆ ಶರಣಾದ ಯುವತಿ. ನೌಶಾದ್ ಎಂಬಾತನ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ನೌಶಾದ್ ಯುವತಿಯ ಜೊತೆಗಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಹಿಮಾ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಪ್ರಾಥಮಿಕ ಶಿಕ್ಷಣವನ್ನು ಹಿಮಾ ಹಾಗೂ ನೌಶಾದ್ ಒಟ್ಟಿಗೆ ಮಾಡುತ್ತಿದ್ದರು. ಪ್ರೀತಿಸುವಂತೆ ಹಿಮಾಳನ್ನು ನೌಶಾದ್ ಒತ್ತಾಯಿಸುತ್ತಿದ್ದ ಎನ್ನಲಾಗಿದೆನೌಶಾದ್ ಜೊತೆ ಪ್ರವಾಸಕ್ಕೆ ಹಿಮಾ ತೆರಳಿದ್ದಳು. ಈ ವೇಳೆ ತೆಗೆದಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೌಶಾದ್ ಅಪ್‌ಲೋಡ್ ಮಾಡಿದ್ದ. ಇನ್ನಷ್ಟು ಫೋಟೋಗಳನ್ನು ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕುವಂತೆ ಹಲವು ಬಾರಿ ಹಿಮಾ ಮಾಡಿದ್ದಳು ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಿಂದ ಫೋಟೋಗಳನ್ನು ತೆಗೆಯದ ಹಿನ್ನಲೆ, ಮನನೊಂದ ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿ ಹಿಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಿಮಾ ತಂದೆ ನಾಗೇಶ್ ಅವರು ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಾಸಕ ಸಿಮೆಂಟ್ ಮಂಜು ಅವರು ಯುವತಿಯ ಅಂತಿಮ ದರ್ಶನ ಪಡೆದಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ನೌಶದ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾ






