

ಕೇರಳದ ವರ್ಕಳ ಸಮೀಪದ ಅಯಿರೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಧರಟ್ಯಾ ನಿವಾಸಿ ಸುಬೀನಾ ಎಂದು ಗುರುತಿಸಲಾಗಿದೆ. ಕೊಲೆ ಆರೋಪದ ಹಿನ್ನೆಲೆಯಲ್ಲಿ ಆಕೆಯ ಪತಿ ಶಾಜನ್‌ನನ್ನು ಅಯಿರೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೆಂಬರ್ 2ರಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಅಯಿರೂರಿನಲ್ಲಿರುವ ತಮ್ಮ ಮನೆಯಲ್ಲೇ ಶಾಜನ್ ಪತ್ನಿ ಸುಬೀನಾಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಮೃತದೇಹದ ಮೇಲೆ ಆರು ಗಾಯಗಳಿರುವುದಾಗಿ ವರದಿಯಾಗಿದೆ. ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಯಿರೂರು ಪೊಲೀಸರು ಶಾಜನ್‌ನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ






