November 3, 2026
WhatsApp Image 2026-11-03 at 12.54.32 PM

ಉಪ್ಪಿನಂಗಡಿ ಹದಗೆಟ್ಟ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ನವೆಂಬರ್ 2, 2026ರಂದು ಕಲ್ಲೇರಿ ಜಂಕ್ಷನ್‌ನಲ್ಲಿ ಸಾರ್ವಜನಿಕ ಪ್ರತಿಭಟನಾ ಧರಣಿ ನಡೆಯಿತು.

ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಡೆದ ಪ್ರತಿಭಟನೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸ್ಥಳೀಯರು ಭಾಗವಹಿಸಿ ರಸ್ತೆ ದುರಸ್ತಿಗೆ ಒತ್ತಾಯಿಸಿದರು. “ಹದಗೆಟ್ಟ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ಮುಕ್ತಿ ಬೇಕು, ಜನರ ಸಂಕಷ್ಟಕ್ಕೆ ಪರಿಹಾರ ಬೇಕು” ಎಂಬ ಆಗ್ರಹದೊಂದಿಗೆ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕರು ತಮ್ಮ ಧ್ವನಿ ಸೇರಿಸುವಂತೆ SDPI ಕರೆ ನೀಡಿತ್ತು.

ಉಪ್ಪಿನಂಗಡಿಯಿಂದ ಕಲ್ಲೇರಿ ಕಡೆಗೆ ಸಾಗುವ ಮಾರ್ಗದಲ್ಲಿಯೂ ರಸ್ತೆ ಸಮಸ್ಯೆ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನಾಕಾರರು ಶಾಸಕ ಹರೀಶ್ ಪೂಂಜಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ದುರಸ್ತಿ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂಬುದು ಪ್ರತಿಭಟನೆಯ ಪ್ರಮುಖ ಆಗ್ರಹವಾಗಿತ್ತು.

About The Author

Leave a Reply