November 4, 2026
WhatsApp Image 2026-11-04 at 8.40.08 AM

ಪುಣೆ: ಎಂಬಿಎ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ 34 ವರ್ಷದ ಯುವತಿ ಕುಟುಂಬದವರಿಗೆ ತಿಳಿಸದೆ ಭಾರತಕ್ಕೆ ಮರಳಿದ್ದು, ಪುಣೆಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಪುತ್ರಿ ಇನ್ನೂ ಲಂಡನ್‌ನಲ್ಲಿಯೇ ಇದ್ದಾಳೆ ಎಂದು ನಂಬಿದ್ದ ಹೆತ್ತವರು, ಆಕೆಯ ಬ್ಯಾಂಕ್ ಖಾತೆಯ ವಹಿವಾಟು ಪರಿಶೀಲಿಸಿದಾಗ ಫುಡ್ ಡೆಲಿವರಿ ಹಾಗೂ ಆನ್‌ಲೈನ್ ಸೇವೆಗಳಿಗೆ ಹಣ ಪಾವತಿಸಿರುವುದು ಪತ್ತೆಯಾಗಿದೆ. ಈ ವಹಿವಾಟಿನ ಜಾಡು ಹಿಡಿದು ಪೊಲೀಸರು ತನಿಖೆ ನಡೆಸಿದಾಗ ಪುಣೆಯ ಫ್ಲ್ಯಾಟ್‌ನಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ಮೃತ ಯುವತಿಯನ್ನು ಛತ್ರಪತಿ ಸಂಭಾಜಿನಗರ ಮೂಲದ ಮುಗ್ಧಾ ಅವಿನಾಶ್ ದೇಶಮುಖ್ (34) ಎಂದು ಗುರುತಿಸಲಾಗಿದೆ. ಗುರುವಾರ ಪಿಂಪ್ರಿ ಚಿಂಚ್‌ವಾಡ್‌ನ ಗಹುಂಜೆಯಲ್ಲಿರುವ ಲೋಧಾ ಬೆಲ್ಲೊಂಡೊ ವಸತಿ ಸಂಕೀರ್ಣದ ಫ್ಲ್ಯಾಟ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಮೇಲೆ ಯಾವುದೇ ಗೋಚರ ಗಾಯದ ಗುರುತುಗಳು ಕಂಡುಬಂದಿಲ್ಲ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

About The Author

Leave a Reply