November 10, 2026
image-522

ಪುತ್ತೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ಕುರಿಯದಲ್ಲಿ ನಡೆದಿದೆ.

ನವೆಂಬರ್ 6ರಂದು ಮಧ್ಯಾಹ್ನ ಮಹಿಳೆಯೊಬ್ಬರು ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬಂದ ಯುವಕ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಬಳಿಕ ಮಹಿಳೆಯ ಸಮೀಪ ಸ್ಕೂಟರ್ ನಿಲ್ಲಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಭೀತರಾದ ಮಹಿಳೆ ಜೋರಾಗಿ ಕೂಗಿಕೊಂಡಿದ್ದು, ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಯುವಕನನ್ನು ಹಿಡಿದು ವಿಚಾರಿಸಿದ್ದಾರೆ.

ವಿಚಾರಣೆ ವೇಳೆ ಆತ ಇಯಾಸ್ ಪುರುಷರಕಟ್ಟೆ ಎಂಬುದು ತಿಳಿದುಬಂದಿದೆ. ಇದೇ ಯುವಕ ಅಕ್ಟೋಬರ್ 30ರಂದು ಕೂಡ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಎನ್ನಲಾಗಿದೆ.

ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 139/2026ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 75(2), 78(1) ಮತ್ತು 79ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೂಕ್ತ ಜಾಮೀನು ಷರತ್ತುಗಳೊಂದಿಗೆ ಬಿಡುಗಡೆ ಮಾಡಿದೆ.

About The Author

Leave a Reply