November 13, 2026
WhatsApp Image 2026-11-13 at 10.47.38 AM

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರು ಚಾಲಕ ನಿಝಾಮ್ ಹಾಗೂ ಸಹ ಪ್ರಯಾಣಿಕ ಮುಫೀಝ್ ಎಂದು ಗುರುತಿಸಲಾಗಿದೆ.

ನ.12ರ ರಾತ್ರಿ ಸುಮಾರು 9.50ರ ವೇಳೆಗೆ ಪಂಪ್‌ವೆಲ್ ಕಡೆಯಿಂದ ಬರುತ್ತಿದ್ದ ಲಾರಿ ನಂತೂರು ಜಂಕ್ಷನ್ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಬಲವಾಗಿ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಲಾರಿಯ ಹಿಂಭಾಗದ ಬಲಬದಿಗೆ ಸಣ್ಣಪುಟ್ಟ ಹಾನಿಯಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ನಿಝಾಮ್ ಮತ್ತು ಮುಫೀಝ್ ಅವರನ್ನು ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply