November 13, 2026
WhatsApp Image 2026-11-13 at 12.31.57 PM

ಮಂಗಳೂರು: SIR ಪ್ರಕ್ರಿಯೆಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳ ವಿರುದ್ಧ ಹಾಗೂ ಮುಖ್ಯ ಚುನಾವಣಾ ಅಧಿಕಾರಿಯನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

ದೇಶದಾದ್ಯಂತ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲೂ ಪ್ರತಿಭಟನೆ ಆಯೋಜಿಸಲಾಗಿದೆ.

ನವೆಂಬರ್ 13ರ ಶುಕ್ರವಾರ ಸಂಜೆ 4 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, SIR ಅಕ್ರಮಗಳ ವಿರುದ್ಧ ಧ್ವನಿ ಎತ್ತುವ ಜೊತೆಗೆ ಮುಖ್ಯ ಚುನಾವಣಾ ಅಧಿಕಾರಿಯ ವಜಾಕ್ಕೆ ಒತ್ತಾಯಿಸಲಾಗುತ್ತದೆ.

ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಪ್ರಜಾಪ್ರಭುತ್ವದ ಪರ ಧ್ವನಿ ಎತ್ತುವವರು ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

About The Author

Leave a Reply