November 14, 2026
WhatsApp Image 2026-11-13 at 8.47.32 PM

ಪುತ್ತೂರು: ಪೆರ್ನೆ ಬಿಳಿಯೂರು ಸಮೀಪ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನವೆಂಬರ್ 13ರಂದು ನಡೆದಿದೆ.

ಮೃತರನ್ನು ತೆಕ್ಕಾರು ಗ್ರಾಮದ ನೈತ್ತಡ್ಕ ನಿವಾಸಿ, ಉಪ್ಪಿನಂಗಡಿಯಲ್ಲಿ ರಿಕ್ಷಾ ನಿಲುಗಡೆ ಮಾಡಿಕೊಂಡು ಬಾಡಿಗೆ ಮಾಡುತ್ತಿದ್ದ ಸದಾಶಿವ (52) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸದಾಶಿವ ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದೇ ವೇಳೆ, ವೈದ್ಯರ ನಿರ್ಲಕ್ಷ್ಯದಿಂದಲೇ ಸದಾಶಿವ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು, ಊರವರು ಹಾಗೂ ರಿಕ್ಷಾ ಚಾಲಕರು ಆಸ್ಪತ್ರೆಯ ಮುಂಭಾಗದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

About The Author

Leave a Reply