November 16, 2026
Bantwal-accident

ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಬೆಂಜನಪದವು ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ. ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಮೃತಪಟ್ಟ ದುರ್ದೈವಿ ಬಾಲಕ. ಈತ ಸ್ಥಳೀಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ.

ಶನಿವಾರ ನವೆಂಬರ್ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸುಚಿನ್ ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದ. ಈ ವೇಳೆ ಕಲ್ಪನೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಸುಚಿನ್‌ನನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಿಗ್ಗೆ ಆತ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

About The Author

Leave a Reply