November 17, 2026
WhatsApp Image 2026-11-17 at 4.45.55 PM

ಬೆಂಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ವೈಷ್ಣವಿ (20) ಮತ್ತು ಜಾಹ್ನವಿ (20) ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕಾಲೇಜಿನ ಪ್ರಾಜೆಕ್ಟ್ ಕೆಲಸದದ ನಿಮಿತ್ತ ವಿದ್ಯಾರ್ಥಿಗಳು ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ವೈಷ್ಣವಿ ಮತ್ತು ಜಾಹ್ನವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಉಳಿದ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಕ್ಕೆಳೆದು ಸಮೀಪದ ನೆಲಮಂಗಲ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

About The Author

Leave a Reply