November 21, 2026
WhatsApp Image 2026-11-21 at 1.48.10 PM

ಬಂಟ್ವಾಳ: ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ವಿಧಾನಪರಿಷತ್ ಶಾಸಕ, ಕಾಂಗ್ರೆಸ್‌ನ ಹಿರಿಯ ನಾಯಕ ಶ್ರೀ ಮಂಜುನಾಥ ಭಂಡಾರಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತವಾಗಿ ದುಡಿದಿರುವ ಮಂಜುನಾಥ ಭಂಡಾರಿಯವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ, ಸಂಘಟನಾ ಸಾಮರ್ಥ್ಯ, ಕಾರ್ಯಕರ್ತರೊಂದಿಗಿನ ನಿರಂತರ ಒಡನಾಟ ಹಾಗೂ ಪಕ್ಷದ ಸಿದ್ಧಾಂತಗಳ ಬಗೆಗಿನ ಬದ್ಧತೆಯನ್ನು ಗುರುತಿಸಿ ಹೈಕಮಾಂಡ್ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಭಂಡಾರಿಯವರು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಪ್ರತಿನಿಧಿಗಳ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ವಿಧಾನಪರಿಷತ್ತಿನಲ್ಲಿ ಅವರ ಪರವಾಗಿ ಪರಿಣಾಮಕಾರಿಯಾಗಿ ಧ್ವನಿ ಎತ್ತುತ್ತಿರುವುದು,ತಾನು ಪ್ರತಿನಿದಿಸುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯತ್ ಗಳಿಗೆ ವಿಶೇಷ ಅನುದಾನವನ್ನು ಸಮರ್ಪಕವಾಗಿ ಬಳಸಿ ವಿತರಿಸಿರುವುದು ಶ್ಲಾಘನೀಯ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಹಕ್ಕು, ಗೌರವ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರಗಳಿಗೆ ಅವರು ನೀಡುತ್ತಿರುವ ಆದ್ಯತೆ ಪಂಚಾಯತ್ ರಾಜ್ ವ್ಯವಸ್ಥೆಗೆ ಹೊಸ ಬಲ ನೀಡಿದೆ.

ಪಕ್ಷದ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಅವರ ಸೇವೆ ಮತ್ತು ಕೊಡುಗೆಯನ್ನು ಪರಿಗಣಿಸಿ ನೀಡಿರುವ ಈ ಜವಾಬ್ದಾರಿ ಅವರ ರಾಜಕೀಯ ಸೇವೆಗೆ ಸಂದ ಗೌರವವಾಗಿದೆ. ಮುಂದಿನ ದಿನಗಳಲ್ಲಿಯೂ ಅವರು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಆಶೋತ್ತರಗಳಿಗೆ ಸ್ಪಂದಿಸಿ, ಪಕ್ಷದ ಸಂಘಟನೆ ಹಾಗೂ ಜನಪರ ಕೆಲಸಗಳಿಗೆ ಮತ್ತಷ್ಟು ಶಕ್ತಿ ತುಂಬಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕುಳಾಲು ಸುಭಾಶ್ಚಂದ್ರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply