November 22, 2026
WhatsApp Image 2026-11-22 at 9.10.54 AM

ಮಂಗಳೂರು: ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದಲ್ಲದೆ, ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 54 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

2021ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2021ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದು ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ ಎಂ.ಎಸ್. ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 54,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ವಾದ ಮಂಡಿಸಿದ್ದರು

About The Author

Leave a Reply