November 23, 2026
WhatsApp Image 2026-11-23 at 5.46.47 PM

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿರುವ ಬೆನ್ನಲ್ಲೇ, ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನಲ್ಲಿರುವ ಎಸ್‌ಐಟಿ ಕಚೇರಿಗೆ ದಾಖಲೆಗಳ ಸಮೇತ ಹಾಜರಾಗಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಹಲವು ಕಡತಗಳು, ದಾಖಲೆಗಳು ಹಾಗೂ ಪತ್ರಿಕಾ ವರದಿಗಳನ್ನು ಸಂಗ್ರಹಿಸಿಕೊಂಡು ಬ್ಯಾಗ್ ತುಂಬಾ ಮಾಹಿತಿಯೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಅವರು ಸಲ್ಲಿಸಲಿರುವ ದಾಖಲೆಗಳು ಹಾಗೂ ಮಾಹಿತಿಗಳ ಬಗ್ಗೆ ಇದೀಗ ಕುತೂಹಲ ಮೂಡಿದೆ.

About The Author

Leave a Reply