November 25, 2026
WhatsApp Image 2026-11-25 at 8.37.31 AM

ಮಗಳು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಜಾರಿ ಬಿದ್ದಿದ್ದನ್ನು ಕಂಡು ರಕ್ಷಿಸಲು ಮುಂದಾದ ತಾಯಿ ಕೂಡಾ ಮಗಳೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಮೃತಪಟ್ಟವರು ಬೆಂಗಳೂರಿನ ಬನಶಂಕರಿ ನಿವಾಸಿಗಳಾದ ಸಲ್ಮಾ(37) ಹಾಗೂ ಅವರ ಪುತ್ರಿ ಸಾದಿಕಾ (14) ಎಂದು ತಿಳಿದು ಬಂದಿದೆ.

ಮೂಲತಃ ನಿಮ್ಮಕಾಯಲಹಳ್ಳಿ ಗ್ರಾಮದವರಾದ ಸಲ್ಮಾ ವಿವಾಹದ ಬಳಿಕ ಪತಿ, ಮಗಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಪುತ್ರಿ ಸಾದಿಕಾ ಜೊತೆ ತವರು ಗ್ರಾಮಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.

ಸೋಮವಾರ ಸಂಜೆ ತಾಯಿ-ಮಗಳು ಗ್ರಾಮದ ಹೊರವಲಯದಲ್ಲಿರುವ ನೀರಿನ ಹೊಂಡದ ಬಳಿ ವಿಹಾರಕ್ಕೆಂದು ತೆರಳಿದ್ದರು. ನೀರಿನ ಹೊಂಡದ ದಡದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಾದಿಕಾ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಕಂಡ ತಾಯಿ ಸಲ್ಮಾ ಮಗಳನ್ನು ರಕ್ಷಿಸುವ ಉದ್ದೇಶದಿಂದ ತಕ್ಷಣವೇ ನೀರಿಗೆ ಇಳಿದಿದ್ದಾರೆ. ಆದರೆ, ನೀರಿನ ಆಳದ ಅರಿವಿಲ್ಲದೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ರಾತ್ರಿಯ ವೇಳೆ ತಾಯಿ-ಮಗಳ ಮೃತದೇಹಗಳನ್ನು ನೀರಿನ‌ ಹೊಂಡದಿಂದ ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author

Leave a Reply