November 26, 2026
WhatsApp Image 2026-11-26 at 1.04.40 PM

ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುಹಮ್ಮದ್ ಅಯಾಸ್ (35), ಬಿ.ಎಂ. ಅಮೀರ್ (33) ಮತ್ತು ಉಮ್ಮರ್ ಫಾರೂಕ್ (35) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 3.91 ಗ್ರಾಂ ಎಂಡಿಎಂಎ ಹಾಗೂ 6.060 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಕಾರು ನಿಯಂತ್ರಣ ತಪ್ಪಿ ಅಂಗಡಿಯೊಂದರ ಜಗಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮಾದಕವಸ್ತು ಸಾಗಾಟದ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ

About The Author

Leave a Reply