November 28, 2026
ghjk

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.27ರಂದು ಬೆಳಿಗ್ಗೆ ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ನಡೆದಿದೆ.

ಮೃತರನ್ನು ಸೋಮವಾರಪೇಟೆ ನಿವಾಸಿ ವಿಶ್ವಾಸ್ (31) ಎಂದು ಗುರುತಿಸಲಾಗಿದೆ.

ವಿಶ್ವಾಸ್ ಅವರು KA-01-HX-1968 ನೋಂದಣಿಯ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ವೇಳೆ, ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ KA-12-MA-8653 ನೋಂದಣಿಯ ಕಾರು ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಕಾರನ್ನು ನಂದನ್ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಹಿತ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಗಾಯಾಳುವನ್ನು ಉಪಚರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಡಬಕ್ಕೆ ಕರೆದೊಯ್ದಿದ್ದರು. ಆದರೆ, ಪರೀಕ್ಷಿಸಿದ ವೈದ್ಯರು ವಿಶ್ವಾಸ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 146/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 281 ಮತ್ತು 106ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply