ಮೂಡಾದಿಂದ ಸೈಟ್‌ಗಳನ್ನ ಪಡೆದಿರುವ ಬಿಜೆಪಿ, ಜೆಡಿಎಸ್‌ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ+ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ+ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ+ಜೆಡಿಎಸ್ ಜಂಟಿ ಸುಳ್ಳುಗಳಿಗೆ ಬಿಜೆಪಿ ಜೆಡಿಎಸ್ ಸದಸ್ಯರ ಸಮ್ಮುಖದಲ್ಲೇ ಆಗಿರುವ ಮೂಡಾ ನಿರ್ಣಯಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಆಗ ಮೂಡದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ಎಂದು ಪ್ರಶ್ನಿಸಿದ್ದಾರೆ.

ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ. ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ? ಎಂದು ಸಿದ್ದರಾಮಯ್ಯ ಅವರು ದಾಖಲೆಗಳನ್ನ ಮುಂದಿಟ್ಟಿದ್ದಾರೆ.

ಬಿಜೆಪಿ ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ. ಮೂಡಾದಿಂದ ಬಿಜೆಪಿ, ಜೆಡಿಎಸ್‌ ನಾಯಕರು ಪಡೆದಿರುವ ಸೈಟ್‌ಗಳ ಪಟ್ಟಿ ಬಿಡುಗಡೆಯನ್ನ ಬಿಡುಗಡೆ ಮಾಡಿದ್ದಾರೆ.

ಬಿಜೆಪಿ ಹೇಳುವುದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಮಂಜುನಾಥ್ ಸ್ವಾಮಿ 20 ವರ್ಷಗಳಲ್ಲಿ ತಕರಾರು ಮಾಡಿಲ್ಲ, ಈಗ ಎತ್ತಿ ಕಟ್ಟಿ ರಾಜಕೀಯ ಮಾಡ್ತಿದ್ದಾರೆ. ಅವರಿಗೆ ಏನಾದ್ರೂ ಮಾನ ಮರ್ಯಾದೆ ಇದೆಯ?ಈಗ ಬಿಜೆಪಿಯವರು ನಮಗೂ ಪಾಲು ಬರಬೇಕು ಅಂತ ಮಂಜುನಾಥ್ ಸ್ವಾಮಿ ಕೈಲಿ ಹೇಳಿಸ್ತೀರಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು. ಹತಾಶರಾಗಿ ರಾಜಕೀಯ ಮಸಿ ಬಳಿಯುವುದಕ್ಕೆ ಇದು ನಿದರ್ಶನ, ಸರ್ಕಾರಕ್ಕೆ ಅವರು ಬರೆದುಕೊಟ್ಡ ಹೇಳಿಕೆ ಮೇಲೆ ದೇವರಾಜ ಗೆ ಮ್ಯುಟೇಷನ್ ಆಗಿದ್ದು. 20 ವರ್ಷದಿಂದ‌ ಜಗಳ‌ ಇಲ್ಲದ ಕುಟುಂಬದಲ್ಲಿ ಜಗಳ ತಂದಿದ್ದಾರಲ್ಲ ಬಿಜೆಪಿಯವರು. ಇಂಥವರಿಗೆ ಏನಂತ ಕರೆಯೋದು ಮನೆ‌ ಮುರುಕರು ಇವರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ‌ರು.

Leave a Reply