ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸಿಖ್‌ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಗೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಮಾಲನ, ಕ್ರೈಸ್ತ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯ ಖಾಯಂ ನಿವಾಸಿಗಳಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. 81,000/- ಮತ್ತು ನಗರ ಪ್ರದೇಶದವರಿಗೆ ರೂ. 1.03 ಲಕ್ಷಕ್ಕಿಂತ ಕಡಿಮೆ ಇರಬೇಕು. ಕುಟಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ/ಪಿಎಸ್‌ಯು ಉದ್ಯೋಗಿಗಳಾಗಿರಬಾರದು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸುಸ್ಥಿದಾರರಾಗಿರಬಾರದು.
ಆಸಕ್ತರು ಸೇವಾಸಿಂಧು ಪೋರ್ಟಲ್ www.kmdconline.karnataka.gov.in ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಬುಕ್ ಜೆರಾಕ್ಸ್, ಯೋಜನಾ ವರದಿ, ಪಡಿತರ ಚೀಟಿ ಮತ್ತು 1 ಪಾಸ್‌ಪೋರ್ಟ್ ಸೈಜ್ ಪೋಟೋ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಜ್ಯುತ್‌ರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ, ದೂ.ಸಂ.: 08182-228262 ನ್ನು ಸಂಪರ್ಕಿಸುವುದು.