ಮಂಗಳೂರು: ದುಷ್ಕರ್ಮಿಗಳಿಂದ ರಾತ್ರೋರಾತ್ರಿ ಎಂಎಲ್‌ಸಿ ಐವನ್ ಮನೆಗೆ ಕಲ್ಲು ತೂರಾಟ

ಮಂಗಳೂರು: ರಾಜ್ಯಪಾಲರ ವಿರುದ್ಧ ಎಂಎಲ್‌ಸಿ ಐವನ್ ಡಿಸೋಜಾ ನೀಡಿರುವ ವಿವಾದಾತ್ಮಕ ಹೇಳಿಕೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಿದ್ದು, ಬುಧವಾರ ರಾತ್ರಿ 11ರ ಸುಮಾರಿಗೆ ದುಷ್ಕರ್ಮಿಗಳು ಅವರ ಮನೆಗೆ ಕಲ್ಲು ತೂರಾಡಿ ಪರಾರಿಯಾಗಿದ್ದಾರೆ. ಸುಮಾರು 5 ರಿಂದ 6 ಮಂದಿಯಿದ್ದ ತಂಡ ರಾತ್ರಿ 11 ಗಂಟೆ ಸುಮಾರಿಗೆ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜರ ಅವರ ಮನೆಗೆ ಕಲ್ಲು ತೂರಾಡಿ ಘೋಷಣೆಗಳನ್ನು ಕೂಗಿ ಪರಾರಿಯಾಗಿದೆ ಎನ್ನಲಾಗಿದೆ. ಈ ಸಂದರ್ಭ ಐವನ್ ಡಿಸೋಜ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್‌ಗೆಂದು ಹೋಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ ವೆಂದು ಹೇಳಲಾಗಿದೆ. ಸದ್ಯ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply