ಮೂಡುಬಿದಿರೆ : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಮೀರ್ ಮೃತ್ಯು..!

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು ಗಂಭೀರವಾಗಿರುವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯೀಸ್ ಅಹಮ್ಮದ್ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ. ಸಮೀ‌ರ್ ಕಳೆದ ಎರಡು ತಿಂಗಳ ಹಿಂದೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್‌ ಕೆಲಸಕ್ಕೆ ಸೇರಿಕೊಂಡಿದ್ದ. ಮಂಗಳವಾರ ಶಾಂಭವಿ ಹಾಸ್ಟೆಲ್‌ನ 5ನೇ ಮಹಡಿಯ ರೋಪ್ ಮೇಲೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಆತ ಕಾಲುಜಾರಿ ಕೆಳಗೆ ಬಿದ್ದಿದ್ದಾಅನೆ. ಈ ಸಂದರ್ಭ ತಲೆ ಮತ್ತು ಕಾಲಿಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply