ಮುಖ್ಯಮಂತ್ರಿ‌ಯ ಪ್ರತಿಕ್ರಿತಿಗೆ ಅವಮಾನ- ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಡುಪಿ : ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಕ್ಕೆ ಶಾಸಕ ಯಶ್​ಪಾಲ್​ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

 

ಹೌದು ಕಳೆದ 2 ದಿನಗಳ ಹಿಂದೆ ಉಡುಪಿಯಲ್ಲಿ ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು.

ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್​ಎಸ್​ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಕರಣ ಹಿನ್ನೆಲೆ ಏನು?

ಅಂದು ಇಡೀ ದೇಶದಾದ್ಯಂತ ಹಿಜಾಬ್ ಭಾರಿ ಸದ್ದು ಮಾಡಿತ್ತು. ಕರ್ನಾಟಕದಲ್ಲಿ ಈ ಒಂದು ಹಿಜಾಬ್ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿತ್ತು. ಆ ಸಂದರ್ಭದಲ್ಲಿಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿಜಿ ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನ ಒಳಗಡೆ ಬಿಟ್ಟುಕೊಳ್ಳದೆ ಪ್ರಾಂಶುಪಾಲರು​ ಗೇಟ್ ಬಳಿ ತಡೆದಿದ್ದರು.

ಆದರೆ ಪ್ರಸಕ್ತ ಸಾಲಿನಲ್ಲಿ ಅವರಿಗೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ, ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಹಿಜಾಬ್ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನ ಒಳಗಡೆ ಬಿಟ್ಟುಕೊಳ್ಳದೆ ಪ್ರಾಂಶುಪಾಲರು​ ಗೇಟ್ ಬಳಿ ತಡೆದಿದ್ದರು.

ವಿದ್ಯಾರ್ಥಿಯರನ್ನು ಗೇಟ್ ಬಳಿ ಪ್ರಾಂಶುಪಾಲರು ತಡೆದಿದ್ದ ಫೋಟೋ ವೈರಲ್ ಆಗಿತ್ತು. ಹೀಗಾಗಿ ಪ್ರಶಸ್ತಿ ಹಿಂಪಡೆಯುವಂತೆ ಹಿಜಾಬ್ ಪರ ಹೋರಾಟಗಾರರು ಒತ್ತಡ ಹಾಕಿದ್ದು, ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಪ್ರಶಸ್ತಿ ತಡೆ ಹಿಡಿದಿತ್ತು. ಇದೇ ವಿಚಾರವಾಗಿ ಉಡುಪಿಯಲ್ಲಿ ಇತ್ತೀಚೆಗೆ ಬಿಜೆಪಿ ನಾಯಕರು ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಾಗಾಗಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply