ಕನ್ಯಾನ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ ) ವಿಟ್ಲ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೇನಾಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ, ಪ್ರಗತಿ ಬಂಧು -ಸ್ವಸಹಾಯ ಸಂಘಗಳ ಒಕ್ಕೂಟ ಕೇಪು ವಲಯ
ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್( ರಿ ) ಕಣಿಯೂರ್ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವು ಶ್ರೀ ಗುರುದೇವ ಕಲ್ಯಾಣ ಮಂಟಪ ಕನ್ಯಾನದಲ್ಲಿ ನಡೆಯಿತು.

 


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ನಡೆಸಿ ಸಮಾಜದಲ್ಲಿ ಜನರಿಗೆ ಅರೋಗ್ಯದ ಬಗ್ಗೆ ಹರಿವು ಪ್ರಸ್ತುತ ಸನ್ನಿವೇಶದಲ್ಲಿ ತೀರಾ ಅಗತ್ಯವಾಗಿದ್ದು, ಇಂತಹ ಉಚಿತ ಅರೋಗ್ಯ ಮಾಹಿತಿಗಳು ಜನರಿಗೆ ತುಂಬಾ ಪ್ರಯೋಜನ ಎಂದು ಎಲ್ಲರಿಗೂ ಆಶೀರ್ವಾದಿಸಿದರು.


ಮುಖ್ಯಅತಿಥಿಯಾಗಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಇಂತಹ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿದೆ, ಪೂಜ್ಯರು ಬಡ ಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಎಂದು ತಿಳಿಸಿದರು.

ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಯವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಇಂತಹ ಹಲವು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದೂ, ಇದರ ಪ್ರಯೋಜನ ನಾವೆಲ್ಲರೂ ಪಡೆಯೋಣ ಎಂದು ತಿಳಿಸಿದರು.


ವೇದಿಕೆಯಲ್ಲಿ ಯೇನಾಪೋಯ ವೈದ್ಯರಾದ ಡಾ! ಸ್ನೇಹ ಶೆಟ್ಟಿ, ದೇಲಂತಾಬಿಟ್ಟು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮನೋಜ್ ಕುಮಾರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಕೇಪು ವಲಯದ ಮಾಜಿ ವಲಯಧ್ಯಕ್ಷರಾದ ಜಯಾನಂದ ಕಣಿಯೂರ್, ಒಕ್ಕೂಟದ ಅಧ್ಯಕ್ಷರುಗಳಾದ ಪೂವಪ್ಪ ಗೌಡ ಶಿರಾಂಕಲ್ಲು, ಕೃಷ್ಣ ನಾಯ್ಕ್, ಶ್ರೀಮತಿ ದರ್ನಮ್ಮ, ಶ್ರೀಮತಿ ಸುಜಾತ, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೇಪು ವಲಯ ಮೇಲ್ವಿಚಾರಕ ಜಗದೀಶ್ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ಜ್ಞಾನದೀಪ ಶಿಕ್ಷಕಿ ಶ್ರೀಮತಿ ರೇಣುಕಾ ಕಣಿಯೂರ್ ಧನ್ಯವಾದ ಮಾಡಿದರು.
ಈ ಉಚಿತ ಅರೋಗ್ಯ ತಪಾಸಣೆ ಶಿಬಿರದಲ್ಲಿ 300 ಸದಸ್ಯರು ಭಾಗವಹಿಸಿ ಶಿಬಿರದ ಸದುಪಯೋಗ ಪಡಕೊಂಡರು.

Leave a Reply