ಇರಾನ್‌ನ ದಕ್ಷಿಣ ಖೊರಾಸನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಅನಿಲದಿಂದಾಗಿ ಸ್ಫೋಟ ಸಂಭವಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮದಂಜೂ ಕಂಪನಿಯು ನಡೆಸುತ್ತಿರುವ ಗಣಿಯಲ್ಲಿರುವ ಬಿ ಮತ್ತು ಸಿ ಎರಡು ಬ್ಲಾಕ್‌ಗಳಲ್ಲಿ ಮೀಥೇನ್ ಅನಿಲ ಸ್ಫೋಟದಿಂದ ಈ ಅಪಘಾತ ಸಂಭವಿಸಿದೆ ಎಂದು ಮಾಧ್ಯಮ ತಿಳಿಸಿದೆ.
ಹದಿನೇಳು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು 24 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತೈಲ ಉತ್ಪಾದಿಸುವ ಇರಾನ್ ಕೂಡ ವಿವಿಧ ಖನಿಜಗಳಿಂದ ಸಮೃದ್ಧವಾಗಿದೆ. ಇರಾನ್ ವಾರ್ಷಿಕವಾಗಿ ಸುಮಾರು 3.5 ಮಿಲಿಯನ್ ಟನ್ ಕಲ್ಲಿದ್ದಲನ್ನು ಬಳಸುತ್ತದೆ ಆದರೆ ವರ್ಷಕ್ಕೆ ಅದರ ಗಣಿಗಳಿಂದ ಕೇವಲ 1.8 ಮಿಲಿಯನ್ ಟನ್ಗಳಷ್ಟು ಮಾತ್ರ ಹೊರತೆಗೆಯುತ್ತದೆ. ಉಳಿದವುಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ.