Visitors have accessed this post 288 times.

ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಒಟ್ಟಿಗೆ ಗೃಹಲಕ್ಷ್ಮೀ 2 ಕಂತಿನ 4,000 ರೂ.ಜಮಾ

Visitors have accessed this post 288 times.

ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಅಕ್ಟೋಬರ್ 7 ಮತ್ತು 9ರಂದು ಎರಡು ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮೂಡಲಗಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.

ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದರು.

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ತಿಳಿಸಿದರು.

Leave a Reply

Your email address will not be published. Required fields are marked *