ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಂಚನೆ- ದೂರು ದಾಖಲು

ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ. 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು ಸಿಮ್ ಇದೆ. ನಿಮ್ಮ ವಿರುದ್ಧ ದೂರು ಇದ್ದು, ಮುಂಬೈಯ ಎಗ್ರಿಪಾಡ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

ತನಗೆ ಅಸಾಧ್ಯ ಎಂದಾಗ ಬೇರೆ ಬೇರೆ ರೂಪದಲ್ಲಿ ಬೇರೆ ಬೇರೆ ಮಂದಿ ಮಾತನಾಡಿ ಸಿಬಿಐ ಅಧಿಕಾರಿ ಎಂದು ನಂಬಿಸಿ ಹಂತ ಹಂತವಾಗಿ 31,12,000 ರೂ. ವನ್ನು ವಿವಿಧ ಬ್ಯಾಂಕ್‌ ಖಾತೆಗೆ ವರ್ಗಾಯಿಸಿ ಮೋಸ ಮಾಡಿದ್ದಾರೆ.

ಆರೋಪಿಗಳಾದ ಸಂದೀಪ್ ರಾವ್, ಸಂಜನಾ, ನವೋಜೋತ್ ಸಿಮಿ ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.

Leave a Reply