Visitors have accessed this post 4 times.

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಭೇರಿ

Visitors have accessed this post 4 times.

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಇಂದು ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ.

1600ಕ್ಕೂ ಅಧಿಕ ಮತದ ಅಂತರದಿಂದ ಕಿಶೋರ್ ಕುಮಾರ್ ಗೆಲುವಿನ ನಗೆ ಬೀರಿದ್ದಾರೆ.
ಕಿಶೋರ್ ಅವರು 3,654 ಮತ ಪಡೆದರು.
1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು. ಒಟ್ಟು 87 ಮತಗಳು ತಿರಸ್ಕೃತವಾಗಿದ್ದವು.

ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.

Leave a Reply

Your email address will not be published. Required fields are marked *