ಕಲಬುರಗಿ : ಮಹಿಳೆಯೋರ್ವಳನ್ನು ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಹತ್ಯೆ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಕೊಲೆಯಾದ ಮಹಿಳೆಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ.
ನಗರದ ಸಂಗಮೇಶ್ವರ ಕಾಲೋನಿಯಲ್ಲಿರುವ ಗಂಡನ ಮನೆಯಲ್ಲಿ ಜೊತೆಗೆ ವಾಸವಿದ್ದಿದ್ದ ಮೃತಳು, ಕಳೆದ 5 ವರ್ಷಗಳ ಹಿಂದೆಯೇ ಗಂಡನ ಮನೆ ತೊರೆದು, ತವರು ಮನೆಗೆ ಹೋಗಿದ್ದಳು ಎಂದು ತಿಳಿದುಬಂದಿದೆ. ನಿನ್ನೆ ಮಧ್ಯಾಹ್ನ ಮನೆಯಿಂದ ಹೊರಗೆ ಹೋದಾಗ, ಆಕೆಯ ಶವವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.