ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ಮಜುನಾಥ್ ಬಂಧಿತ ಶಿಕ್ಷಕ. ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ವಿದ್ಯಾರ್ಥಿನಿಯರ ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಆಯೋಗದ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿ ಶಿಕ್ಷಕ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ.