ಹೈದರಾಬಾದ್: 11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ ಶಾಲೆಯೊಂದರಲ್ಲಿ ನಡೆದಿದೆ.
ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ.
ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ.