ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ..!!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.

ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ.

ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗುತ್ತಿದೆ.

 

Leave a Reply