ಮಾಜಿ ಪ್ರಧಾನಿ ಡಾ. ಮನಮೋನನ್ ಸಿಂಗ್ ನಿಧನ: ಮಾಜಿ ಸಚಿವರಾದ ಬಿ. ರಮಾನಾಥ ರೈ ಸಂತಾಪ

ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್(92) ಅವರು ವಯೋಸಹಜ ಕಾಯಿಲೆಯಿಂದ ಡಿ. 26ರಂದು ನಿಧರಾಗಿದ್ದಾರೆ. ಅವರ ನಿಧನಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ  ಸಂತಾಪ ಸೂಚಿಸಿದ್ದಾರೆ.

ಆಧುನಿಕ ಭಾರತದ ಅಭಿವೃದ್ಧಿಯ ನೇತಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ರಮಾನಾಥ ರೈ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply